ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲ: 60 ಭಾರತೀಯರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉದ್ಯೋಗ ಅರಸಿ ಕಾಂಬೋಡಿಯಾಗೆ ತೆರಳಿದ್ದ ಭಾರತೀಯ ಯುವಕರು ಇದೀಗ ವಾಪಾಸಾಗಿದ್ದಾರೆ. ಉದ್ಯೋಗದ ಹೆಸರಿನಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ ಭಾರತೀಯರನ್ನು ರಕ್ಷಣೆ ಮಾಡಲಾಗಿದೆ.

60 ಮಂದಿ ಭಾರತೀಯರನ್ನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. ಇದರಲ್ಲಿನ ಮೊದಲ ಬ್ಯಾಚ್‌ ಇಂದು ಭಾರತಕ್ಕೆ ಆಗಮಿಸಿದೆ.

ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲ್ಲೆನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್‌ಬೆ-4 ಎಂಬ ಸ್ಥಳದಲ್ಲಿ ರಕ್ಷಣೆ ಭಾರತೀಯರನ್ನ ಮಾಡಿದ್ದಾರೆ. ಅಲ್ಲದೇ ಇನ್ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ ಏಜೆಂಟರ್ ಮೂಲಕ ಮಾತ್ರವೇ ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!