ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕುರಿತು ಜೂನ್ 1 ರಂದು ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗುತ್ತದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹಿಳೆಯರಿಗೆ ಬಸ್ ಪಾಸ್ ಗ್ಯಾರೆಂಟಿ ಕೊಡುತ್ತೇವೆ.ವಿಪಕ್ಷಗಳು ತಾಳ್ಮೆಯಿಂದ ಇರಬೇಕು. ಸ್ಕೂಲ್ ಬಸ್ ಪಾಸ್ ನಂತೆ ಮಹಿಳೆಯರ ಬಸ್ಪಾಸ್ಗೂ ಇಲಾಖೆಗಳಿಗೆ ಹಣ ಕೊಡುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.