ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ (Naveen Patnaik), ಕೋಲ್ಕತ್ತಾಗೆ (Kolkata) ಉಚಿತ ಬಸ್ ಸೇವೆ ಒದಗಿಸಲಾಗಿದೆ ಎಂದು ಘೋಷಿಸಿದ್ದಾರೆ.
ಪ್ರಯಾಣಿಕರ ಹೆಚ್ಚಿನ ಪ್ರಯೋಜನವನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿದಿನ ಸುಮಾರು 50 ಬಸ್ಸುಗಳು ಕೋಲ್ಕತ್ತಾ ಮತ್ತು ಒಡಿಶಾದ ನಡುವಿನ ಮೂರು ನಗರಗಳಲ್ಲಿ ಸಂಚಾರ ನಡೆಸಲಿವೆ. ಇದಕ್ಕೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು. ಬಾಲಸೋರ್ ಮಾರ್ಗದಲ್ಲಿ ಸಾಮಾನ್ಯ ರೈಲು ಸೇವೆಯನ್ನು ಮರುಸ್ಥಾಪಿಸುವವರೆಗೆ ಈ ವ್ಯವಸ್ಥೆ ಮುಂದುವರಿಯುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.