Monday, October 2, 2023

Latest Posts

ಮಹಿಳೆಯರಿಗೆ ಉಚಿತ ಪ್ರಯಾಣ: ಇನ್ಮುಂದೆ ಬಿಎಂಟಿಸಿ ಬಸ್‌ ಟಿಕೆಟ್ ಹೇಗಿರತ್ತೆ ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಪಕ್ಷ​ ಅಧಿಕಾರಕ್ಕೆ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ.

ಜೂನ್​ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ ಸರ್ಕಾರ ಕೆಲವು ಷರತ್ತುಗಳನ್ನು ಕೂಡ ವಿಧಿಸಿದೆ.

ಸರ್ಕಾರಿ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್​ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಕೂಡ ಅವಕಾಶ ಇದೆ. ಎಸಿ, ಐಷಾರಾಮಿ ಬಸ್​ ಮತ್ತು ರಾಜಹಂಸ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವುದಿಲ್ಲ.

ಉಚಿತ ಪ್ರಯಾಣದ ವೇಳೆ ಮಹಿಳೆರಿಗೆ ಟಿಕೆಟ್​ ಕೊಡುತ್ತಾರಾ? ಅಥವಾ ಯಾವುದಾದರೂ ದಾಖಲೆ ತೆಗೆದುಕೊಂಡು ಹೋಗಬೇಕಾ ಎಂಬ ಗೊಂದಲ ಮಹಿಳೆಯರಲ್ಲಿದೆ. ಆದರೆ ಆ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಬಸ್​ನಲ್ಲಿ ಟಿಕೆಟ್ ಪಡೆಯುವ ಗೋಜಿಲ್ಲ ಅಂತ ಮಹಿಳೆಯರು ಅಂದುಕೊಳ್ಳಬೇಡಿ. ಏಕೆಂದರೆ ಕಂಡಕ್ಟರ್​ ಮಹಿಳೆಯರಿಗೂ ಟಿಕೆಟ್ ನೀಡಲಿದ್ದಾರೆ.

ಟಿಕೆಟ್‌ ಹೇಗಿರತ್ತೆ ನೋಡಿ

ಯೋಜನೆ ಜಾರಿಗೂ ಮೊದಲು ನಾಲ್ಕು ನಿಗಮಗಳಲ್ಲೂ ಇದಕ್ಕಾಗಿ ಭಾರೀ ಸಿದ್ಧತೆ ನಡೆಯುತ್ತಿದೆ. ಶಕ್ತಿ ಯೋಜನೆಯ ಹೊಸ ಟಿಕೆಟ್ ಈಗ ರಚನೆಯಾಗಿದೆ. ಟಿಕೆಟ್​ ಮೇಲೆ “ಮಹಿಳಾ ಪ್ರಯಾಣಿಕರ ಉಚಿತ ಚೀಟಿ ಶಕ್ತಿ ಯೋಜನೆ” ಎಂದು ಬರೆದಿರುತ್ತಾರೆ ಮತ್ತು ಟಿಕೆಟ್​ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್​ ಬಳಿ ಟಿಕೆಟ್​ ಕೇಳಿ ಪಡೆದುಕೊಳ್ಳಬೇಕು. ಆದರೆ ಬದಲಾವಣೆ ಏನೆಂದರೆ ಈಗ ಹಣ ಪಾವತಿಸುವಂತಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!