ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರಕಾರದ ಶಕ್ತಿ ಯೋಜನೆ ಜಾರಿಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದ್ದು, ಸ್ಮಾರ್ಟ್ ಕಾರ್ಡ್ ಪಡೆಯುವವರೆಗೆ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು.

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಡಿಎಲ್, ಸರ್ಕಾರ ನೀಡಿದ ಅಂಗವಿಕಲರ ಕಾರ್ಡ್, ಹಿರಿಯ ನಾಗರೀಕರ ಗುರುತಿನ ಚೀಟಿ ಸೇರಿ ಸರ್ಕಾರದ ಗುರುತಿನ ಚೀಟಿ ತೋರಿಸಿ ಸಂಚರಿಸಲು ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಸ್ತೃತವಾದಂತ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ರಾಜ್ಯದ ಎಲ್ಲಾ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ನೀಡುವ ಸಂಬಂಧ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದಿದ್ದಾರೆ.

ದಿನಾಂಕ 11-06-2023ರಿಂದ ಜಾರಿಗೊಳಿಸಲು ಸರ್ಕಾರದ ದಿನಾಂಕ 05-06-2023ರಂದು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆ ಮುಖ್ಯಾಂಶಗಳು

  • ಕರ್ನಾಟಕ ರಾಜ್ಯದ ಮಹಿಳೆಯರಿಗೆ ( ವಿದ್ಯಾರ್ಥಿನಿಯರು ಸೇರಿದಂತೆ ) ಮಾತ್ರ ಉಚಿತ ಪ್ರಯಾಣ
  • ಮಹಿಳಾ ಪ್ರಯಾಣಿಕರ ಪೈಕಿ 6 ವರ್ಷದಿಂದ 12 ವರ್ಷದವರೆಗಿನ ಬಾಲಕಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಸಹ ಒಳಗೊಂಡಿರುತ್ತಾರೆ.
  • ರಾಜ್ಯಾಧ್ಯಂತ ಕೆ ಎಸ್ ಆರ್ ಟಿ ಸಿಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ (ತಡೆರಹಿತ ಸಾರಿಗೆಗಳು ಒಳಗೊಂಡಂತೆ ) ಸಾರಿಗೆಗಳಲ್ಲಿ ಮಾತ್ರ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ
  • ಐಷಾರಾಮಿ ಬಸ್ಸುಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪ್ಲಸ್ ಸಾರಿಗಗೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವು ಅನ್ವಯಿಸುವುದಿಲ್ಲ.
  • ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ದೂರುದ ಯಾವುದೇ ಮಿತಿ ಇರುವುದಿಲ್ಲ.
  • ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯ
  • ಶಕ್ತಿ ಯೋಜನೆಯ ದೈನಿಕ ಪಾಸು, ಮಾಸಿಕ ಪಾಸು, ಸಾಂದರ್ಭಿಕ ಒಪ್ಪಂದ ಹಾಗೂ ಖಾಯಂ ಗುತ್ತಿಗೆ ಪ್ಯಾಕೇಜ್ ಮುಂತಾದ ಸೇವೆಗಳಿಗೆ ಅನ್ವಯಿಸುವುದಿಲ್ಲ.ಈ ದಾಖಲೆಗಳನ್ನು ಉಚಿತವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸಲು ಮಹಿಳೆಯರು ತೋರಿಸುವುದು ಕಡ್ಡಾಯ
  • ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಡಿಎಲ್, ಸರ್ಕಾರ ನೀಡಿದ ಅಂಗವಿಕಲರ ಕಾರ್ಡ್, ಹಿರಿಯ ನಾಗರೀಕರ ಗುರುತಿನ ಚೀಟಿ ಸೇರಿ ಸರ್ಕಾರದ ಗುರುತಿನ ಚೀಟಿ ತೋರಿಸುವುದು ಕಡ್ಡಾಯ
  • ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವವರೆಗೆ ಮೇಲೆ ತಿಳಿಸಿರುವ ಗುರುತಿನ ಚೀಟಿಗಳನ್ನು ಪರಿಗಣಿಸಿ, ಶೂನ್ಯ ಮೊತ್ತದ ಮಹಿಳೆಯರ ಉಚಿತ ಟಿಕೆಟ್ ಗಳನ್ನು ವಿತರಿಸಲು ಸೂಚಿಸಿದೆ.

ನಿರ್ವಾಹಕರ ಕೆಲಸ ಏನು?

  • ಕೆಲ ಆಯ್ದ ಅಂತಾರಾಜ್ಯ ಸಾರಿಗೆಗಗಳನ್ನು ಹೊರತುಪಡಿಸಿ, ಉಳಿದ ಅಂತಾರಾಜ್ಯ ಸಾರಿಗೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶವಿರುವುದಿಲ್ಲ. ಈ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡುವಂತೆ, ಸೌಜನ್ಯದಿಂದ ವರ್ತಿಸುವುದು.
  • ಈ ಯೋಜನೆಯಡಿ ವಿತರಿಸುವ ಉಚಿತ ಪ್ರಯಾಣದ ಟಿಕೇಟ್ ಉಚಿತವೆಂದು ಭಾವಿಸಬಾರದು. ಈ ಟಿಕೆಟ್ ಗಳ ವಿತರಣೆಯಿಂದ ಬರುವ ಮೊತ್ತವನ್ನು ಕರ್ನಾಟಕ ಸರ್ಕಾರವು ಮರುಪಾವತಿಸುತ್ತದೆ ಎಂದು ತಿಳಿಸಿದೆ.
  • ವಾಹನದಲ್ಲಿ ಇರುವ ಎಲ್ಲಾ ಪ್ರಯಾಣಿಕರಿಗೆ ಟಿಕೆಟ್ ವಿತರಿಸುವ ಮಾದರಿಯಂತೆ ಎಲ್ಲಾ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಶೂನ್ಯ ಮೊತ್ತದ ಟಿಕೆಟ್ ವಿತರಿಸುವುದು ಕಡ್ಡಾಯ
  • ಮಹಿಳಾ ಪ್ರಯಾಣಿಕರು ಯಾವುದಾದರೂ ದಾಖಲೆ ಹಾಜರುಪಡಿಸಿದರೂ ಅನುಮತಿಸುವುದು. ಡಿಜಿಲಾಕರ್ ಮುಖಾಂತರ ಗುರುತಿನ ಚೀಟಿ ಹಾಜರುಪಡಿಸಿದರು ಮಾನ್ಯ ಮಾಡುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!