ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಬಳಿಕ ಇದೀಗ ತೆಲಂಗಾಣದಲ್ಲಿ ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ದೊರೆತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೂರೇ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಮುಂದಾಗಿದ್ದು, ಇಂದು ಮಹಾಲಕ್ಷ್ಮೀ ಯೋಜನೆ ಜಾರಿಗೆ ನೂತನ ಸಿಎಂ ರೇವಂತ್ ರೆಡ್ಡಿ ನಿರ್ಧರಿಸಿದ್ದಾರೆ.
ಇಂದಿನಿಂದ ಮಹಾಲಕ್ಷ್ಮೀ ಯೋಜನೆ ಜಾರಿಗೆ ಬರಲಿದ್ದು, ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ಈ ಮೂಲಕ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಬಹುದು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜನ್ಮ ದಿನವಾದ ಇಂದು ಮಹಾಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ. ಅದಲ್ಲದೆ ರಾಜೀವ್ ಆರೋಗ್ಯ ಶ್ರೀ ಫಲಾನುಭವಿಗಳಿಗೆ 10 ಲಕ್ಷ ವಿಮಾ ಯೋಜನೆ ಕೂಡ ಇಂದು ಜಾರಿಯಾಗಲಿದೆ.