Sunday, January 11, 2026

2026ರ ಏಪ್ರಿಲ್ ನಿಂದ ಬಾಲಕಿಯರಿಗೆ ಉಚಿತ ಸರ್ವಿಕಲ್ ಕ್ಯಾನ್ಸರ್ ಲಸಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಬಾಲಕಿಯರಿಗೆ ಏಪ್ರಿಲ್ 2026 ರಿಂದ ಸರ್ವಿಕಲ್ ಕ್ಯಾನ್ಸರ್ ಗೆ ಉಚಿತ ಲಸಿಕೆ ನೀಡಲಾಗುವುದು ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ಶುಕ್ರವಾರ ಘೋಷಿಸಿದ್ದಾರೆ.

ಇಂದು ಸೊರೆಂಗ್ ಜಿಲ್ಲೆಯ ಬುರಿಯಾಖೋಪ್ ಶಾಲೆಯ ಪ್ಲಾಟಿನಂ ಜುಬಿಲಿ ಕಾರ್ಯಕ್ರಮದಲ್ಲಿ ಮಾತನಾಡಿದ ತಮಾಂಗ್, 30 ರಿಂದ 65 ವರ್ಷ ವಯಸ್ಸಿನ ಮಹಿಳೆಯರಿಗೆ ರೋಗದ ಆರಂಭಿಕ ಪತ್ತೆ ಮತ್ತು ಚಿಕಿತ್ಸೆಗಾಗಿ ಮುಂದಿನ ವರ್ಷ ಏಪ್ರಿಲ್ ನಿಂದ ಉಚಿತ ಗರ್ಭಕಂಠ(ಸರ್ವಿಕಲ್)ದ ಕ್ಯಾನ್ಸರ್ ಪರೀಕ್ಷಾ ಕಿಟ್‌ಗಳನ್ನು ನೀಡಲಾಗುವುದು ಎಂದು ಹೇಳಿದರು.

ಬಾಲಕಿಯರಲ್ಲಿ ಇದು ಅತ್ಯಂತ ಪರಿಣಾಮಕಾರಿಯಾಗಿರುವುದರಿಂದ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳನ್ನು ಲಸಿಕೆಗಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.

“2026 ರ ವೇಳೆಗೆ, ನಾವು ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಈ ಲಸಿಕೆಗಳನ್ನು ನೀಡುತ್ತೇವೆ. ಇದು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ಅತ್ಯಂತ ಅಗತ್ಯವಾದ ಉಪಕ್ರಮವಾಗಿದೆ ಮತ್ತು ಎಲ್ಲರೂ ಈ ಅಭಿಯಾನದಲ್ಲಿ ಭಾಗವಹಿಸಬೇಕೆಂದು” ಎಂದು ಸಿಕ್ಕಿಂ ಸಿಎಂ ಮನವಿ ಮಾಡಿದರು.

error: Content is protected !!