Wednesday, July 6, 2022

Latest Posts

ರಾಜ್ಯದಲ್ಲಿ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ -19 ಲಸಿಕೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಎಲ್ಲ ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್ – 19ನ ಮೊದಲ ಹಂತದ ಲಸಿಕೆಯನ್ನು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಹಯೋಗದೊಂದಿಗೆ ನೀಡಲು ತೀರ್ಮಾನಿಸಲಾಗಿದೆ.
ಇನ್ನು ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಈ ಲಸಿಕಾ ಅಭಿಯಾನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಇಲಾಖೆ ಸಚಿವ ಡಾ. ನಾರಾಯಣಗೌಡ ಚಾಲನೆ ನೀಡಲಿದ್ದಾರೆ.
ರಾಜ್ಯ ಸರ್ಕಾರವು 18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳನ್ನು ಆದ್ಯತಾ ಗುಂಪಿಗೆ ಸೇರಿಸಿದ್ದು, ನೋಂದಣಿ ಮಾಡಿಕೊಂಡ ಕ್ರೀಡಾಪಟುಗಳಿಗೆ ಲಸಿಕೆ ನೀಡಲಿದೆ. ಈಗಾಗಲೇ 2200 ಕ್ರೀಡಾಪಟುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, 10 ಮತ್ತು 11 ನೇ ತಾರೀಖಿನಂದು ಇವರಿಗೆ ಲಸಿಕೆ ನೀಡಲಾಗುವುದು. ಇದುವರೆಗು ಹೆಸರನ್ನು ನೋಂದಾಯಿಸಿಕೊಳ್ಳದ ಕ್ರೀಡಾಪಟುಗಳು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಆಯಾ ರಾಜ್ಯ ಕ್ರೀಡಾ ಸಂಸ್ಥೆಗಳ ಮೂಲಕ ನೋಂದಾಯಿಸಿಕೊಳ್ಳಬೇಕು.
ಕ್ರೀಡಾಪಟುಗಳಿಗೆ ಲಸಿಕೆ ನೀಡಲು ದಿನಾಂಕ ನಿಗದಿ
10-06-2021 ಗುರುವಾರದಂದು ಬಾಸ್ಕೆಟ್‌ಬಾಲ್, ಫೆನ್ಸಿಂಗ್, ಈಜು, ಹಾಕಿ, ಟೆನ್ನಿಕಾಯ್ಸ್, ಬ್ಯಾಡ್ಮಿಂಟನ್, ರೋಯಿಂಗ್ ಮತ್ತು ನೆಟ್‌ಬಾಲ್ ಕ್ರೀಡೆಗಳ ಕ್ರೀಡಾಪಟುಗಳಿಗೆ ಹಾಗೂ 11-06-2021 ಶುಕ್ರವಾರದಂದು ವುಶು, ಶೂಟಿಂಗ್, ಹ್ಯಾಂಡ್‌ಬಾಲ್, ಫುಟ್ಬಾಲ್ ಅಥ್ಲೆಟಿಕ್ಸ್, ಟೇಬಲ್ ಟೆನ್ನಿಸ್, ವಾಲಿಬಾಲ್ ಮತ್ತು ರೋಲರ್ ಸ್ಕೇಟಿಂಗ್ ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುವುದು. ರಾಜ್ಯಾಧ್ಯಂತ 10 ಸಾವಿರಕ್ಕು ಹೆಚ್ಚು ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುವುದು. ಈಗಾಗಲೆ ನೋಂದಣಿ ಮಾಡಿಸಿಕೊಂಡವರನ್ನು ಹೊರತುಪಡಿಸಿ ಉಳಿದ ಕ್ರೀಡಾಪಟುಗಳಿಗೆ ಲಸಿಕಾ ಅಭಿಯಾನವನ್ನು ಮುಂದುವರೆಸಿ ಮುಂದಿನ ದಿನಗಳಲ್ಲಿ ನೀಡಲಾಗುವುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss