ಮುಂದಿನ 75 ದಿನ ಉಚಿತ ಕೋವಿಡ್​ ಬೂಸ್ಟರ್ ಡೋಸ್: ಕೇಂದ್ರ ಸರಕಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

75ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬರುವ ಶುಕ್ರವಾರದಿಂದ ಮುಂದಿನ 75 ದಿನಗಳ ಕಾಲ ದೇಶಾದ್ಯಂತ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೋವಿಡ್​ ಬೂಸ್ಟರ್ ಡೋಸ್​ ನೀಡಲು ನಿರ್ಧರಿಸಿದೆ.
ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಅನುರಾಗ್ ಠಾಕೂರ್, ‘ಆಜಾದಿ ಕಾ ಅಮೃತ್​ ಮಹೋತ್ಸವ’ ನಿಮಿತ್ತ ಈ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 15ರಿಂದ ಮುಂದಿನ 75 ದಿನಗಳವರೆಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜುಲೈ 15ರಿಂದ ಈ ಯೋಜನೆ ಜಾರಿಗೊಳ್ಳಲಿದ್ದು, ಈ ಸೌಲಭ್ಯ ಎಲ್ಲರಿಗೂ ಲಭ್ಯವಿರಲಿದ್ದು, ಸರ್ಕಾರಿ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಸಿಗಲಿದೆ ಎಂದಿದ್ದಾರೆ. ಕೋವಿಡ್​​ನ ಎರಡನೇ ಡೋಸ್​ ಪಡೆದ ಆರು ತಿಂಗಳ ಬಳಿಕ ಫಲಾನುಭವಿಗಳು ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here