ಫ್ರೀ ಕರೆಂಟ್ ಫ್ರೀ ಕರೆಂಟ್.. ಉಪಕರಣಗಳ ಖರೀದಿಗೆ ಮುಗಿಬಿದ್ದ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಸಂಭ್ರಮಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಗೆದ್ದರೆ 200 ಯುನಿಟ್ ಫ್ರೀ ಕರೆಂಟ್ ಎಂದು ಹೇಳಿದ್ದರು.

ಕರೆಂಟ್ ಬಿಲ್ ಹೆಚ್ಚು ಬರುತ್ತದೆ ಎನ್ನುವ ಕಾರಣಕ್ಕೆ ವಿದ್ಯುತ್ ಉಪಕರಣಗಳನ್ನು ಕೊಳ್ಳದ ಜನ ಇದೀಗ ಫ್ರೀ ಕರೆಂಟ್ ಕಾರಣದಿಂದಾಗ ಎಸಿ, ಟಿವಿ, ಫ್ರಿಡ್ಜ್, ವಾಶಿಂಗ್ ಮಶೀನ್, ಎಲೆಕ್ಟ್ರಿಕ್ ಸ್ಟೊವ್ ಹಾಗೂ ಫ್ಯಾನ್‌ಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.

ಇಷ್ಟೇ ಅಲ್ಲ ಈಗಲೇ ಹಳ್ಳಿಗಳಲ್ಲಿ ಲೈನ್‌ಮೆನ್‌ಗಳು ಕರೆಂಟ್ ಬಿಲ್ ವಸೂಲಿಗೆ ಬಂದರೆ ಜನ ನಮಗೆ ಕರೆಂಟ್ ಫ್ರೀ, ಕರೆಂಟ್ ಬಿಲ್ ಕಟ್ಟೋದಿಲ್ಲ ಎಂದು ಹೇಳಿ ಕಳಿಸಿದ್ದಾರೆ.

ಪ್ರಣಾಳಿಕೆ ಬಿಡುಗಡೆ ವೇಳೆ ಕಾಂಗ್ರೆಸ್ ಐದು ಗ್ಯಾರೆಂಟಿ ಘೋಷಣೆ ಮಾಡಿ ನಮ್ಮನ್ನು ಗೆಲ್ಲಿಸಿ ಎಂದು ಮತದಾರನಿಗೆ ಮನವಿ ಮಾಡಿದ್ದರು. ಅಂತೆಯೇ ಮತದಾರ ಕಾಂಗ್ರೆಸ್ ಕೈ ಹಿಡಿದಿದ್ದು, ಇದೀಗ ಎಲ್ಲ ಗ್ಯಾರೆಂಟಿಗಳನ್ನು ಈಡೇರಿಸುವುದು ಕಾಂಗ್ರೆಸ್ ಕರ್ತವ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!