ಉಕ್ರೇನ್​​ನಿಂದ ರಾಜ್ಯಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ಸಚಿವ ಡಾ.ಕೆ.ಸುಧಾಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್

ಉಕ್ರೇನ್​​ನಿಂದ ರಾಜ್ಯಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಯುವ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಉಕ್ರೇನ್​ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದ ಅವರು, ವಿದ್ಯಾರ್ಥಿಗಳಿಂದ ಸಲಹೆ, ಅಭಿಪ್ರಾಯಗಳನ್ನು ಪಡೆದರು.
ವಿದ್ಯಾರ್ಥಿಗಳ ಶೈಕ್ಷಣಿಕ ವಿಚಾರವಾಗಿ ಚರ್ಚೆ ನಡೆದಿದೆ. ಸಿಎಂ ಸೂಚನೆ ಮೇರೆಗೆ ಸಭೆ ನಡೆಸಲಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಮುಂದುವರಿಕೆಗೆ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದರು.
ಉಕ್ರೇನ್​​ನಿಂದ ಬಂಡ ವಿದ್ಯಾರ್ಥಿಗಳ ಶಿಕ್ಷಣ ಅರ್ಧದಲ್ಲಿ ನಿಲ್ಲಬಾರದು. ರಾಜ್ಯದಲ್ಲಿನ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ ಉಚಿತವಾಗಿ ವಿದ್ಯಾರ್ಥಿಗಳ ಕಲಿಕೆ ಮುಂದುವರಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.
ಆದರೆ ಇಲ್ಲಿ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಲಾಗುವುದಿಲ್ಲ. ಕಲಿಕೆ ಮುಂದುವರಿಸಲು ಅವಕಾಶ ನೀಡಲಾಗುತ್ತದೆ. ಅವರು ಇರುವ ವಿಳಾಸದ ಆಧಾರದಲ್ಲಿ ಸನಿಹದ ವೈದ್ಯಕೀಯ ಕಾಲೇಜುಗಳನ್ನು ಸರ್ಕಾರವೇಆಯ್ಕೆ ಮಾಡುತ್ತದೆ ಎಂದರು.
.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!