ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಡಿಗೆದಾರರಿಗೂ ಉಚಿತ ವಿದ್ಯುತ್‌ ಯೋಜನೆ ಅನ್ವಯವಾಗಲಿದೆ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರಿಗೆ ಉಚಿತ ವಿದ್ಯುತ್ ನೀಡಲ್ಲ ಎಂಬುದು ಸುಳ್ಳು, ಬಾಡಿಗೆದಾರರಿಗೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸಿಗಲಿದೆ. 200 ಯೂನಿಟ್‌ ಒಳಗೆ ವಿದ್ಯುತ್ ಉಪಯೋಗಿಸುವ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುವುದು. ಬಾಡಿಗೆದಾರರಿಗೂ ಇದು ಅನ್ವಯವಾಗಲಿದೆ, ಆದರೆ ಯಾವುದೇ ವಾಣಿಜ್ಯ ಅಥವಾ ಕಮರ್ಷಿಯಲ್‌ ಬಳಕೆದಾರರಿಗೆ ಉಚಿತ ವಿದ್ಯುತ್‌ ಇಲ್ಲ ಎಂದರು.

ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ 

ಈ ಪ್ರಯೋಜನವನ್ನು ಪಡೆಯಲು ಬಯಸುವ ಗ್ರಾಹಕರು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. 2022-2023ರ ಹಣಕಾಸು ವರ್ಷದಲ್ಲಿ 12 ತಿಂಗಳ ಸರಾಸರಿ ಬಳಕೆ ಮತ್ತು ಶೇಕಡಾ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆ 200 ಯೂನಿಟ್‌ಗಳನ್ನು ಮೀರದಿದ್ದರೆ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ. 200 ಯೂನಿಟ್ ದಾಟಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ ಪಾವತಿಸಬೇಕಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!