ಹೊಸದಿಗಂತ ಡಿಜಿಟಲ್ ಡೆಸ್ಕ್:
60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ನೇತ್ರ ತಪಾಸಣೆ ಹಾಗೂ ಕನ್ನಡಕ ನೀಡುವ ಯೋಜನೆಯನ್ನು ಶೀಘ್ರ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆಸ್ಪತ್ರೆಗೆ ಬರುವ ಬಡವರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕು. ಇದಕ್ಕೆ ತಕ್ಕ ಯೋಜನೆ ರೂಪಿಸಬೇಕು. ಬಡವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿಲ್ಲ, ಅಂತಹ ಪರಿಸ್ಥಿತಿ ಬಂದಿದೆ. ಇದನ್ನು ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳಬೇಕು. ಆರ್ಥಿಕ ಸ್ಥಿತಿ ಕಾರಣದಿಂದಾಗಿ ಸೂಕ್ತ ಚಿಕಿತ್ಸೆ ಪಡೆಯದೆ ಪರದಾಡುತ್ತಿರುವವರಿಗೆ ಸಹಾಯವಾಗಬೇಕು ಎಂದಿದ್ದಾರೆ.