ಬಂಗಾಳದಲ್ಲಿ ಭ್ರಷ್ಟಾಚಾರ, ಹಿಂಸಾಚಾರಕ್ಕೆ ಟಿಎಂಸಿಯಿಂದ ಉಚಿತ ಪರವಾನಗಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ಟಿಎಂಸಿ ಉಚಿತ ಪರವಾನಗಿ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾನುವಾರ ಜಲ್‌ಪೈಗುರಿಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ಟಿಎಂಸಿ ಉಚಿತ ಪರವಾನಗಿ ನೀಡುತ್ತಿದೆ.ಇಂತಹ ಪ್ರಕರಣಗಳ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ಮಾಡಲು ಬಂದರೆ ರಾಜ್ಯದಲ್ಲಿ ಅವರ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೇದಿನಿಪುರದಲ್ಲಿ 2022ರಲ್ಲಿ ಸ್ಫೋಟ ನಡೆದಿತ್ತು. ಶನಿವಾರ ಈ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಇಬ್ಬರನ್ನು ಬಂಧಿಸಲು ಯತ್ನಿಸಿದಾಗ ಅವರ ಮೇಲೆ ಜನರು ದಾಳಿ ಮಾಡಿದ್ದರು. ಈ ಘಟನೆ ನಡೆದ ಒಂದು ದಿನದ ಬಳಿಕ ವಿಷಯ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂದೇಶ್‌ಖಾಲಿಯ ಲೈಂಗಿಕ ಕಿರುಕುಳ ವಿಷಯ ಪ್ರಸ್ತಾಪ ಮಾಡಿದ ಮೋದಿ, ಇಲ್ಲಿನ ಅಪರಾಧಿಗಳು ತಮ್ಮ ಮುಂದಿನ ಜೀವನವನ್ನು ಜೈಲಿನಲ್ಲಿ ಕಳೆಯಲಿದ್ದಾರೆ ಎಂದು ಜನರಿಗೆ ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!