ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ (NEET-CET) ತರಬೇತಿ ನೀಡುವ ಕಾರ್ಯಕ್ರಮ ಶಿಕ್ಷಣ ಇಲಾಖೆ ಜಾರಿ ಮಾಡುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಧು ಬಂಗಾರಪ್ಪ, ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್-ಸಿಇಟಿ ವಿಶೇಷ ತರಬೇತಿ ಕೊಡುವ ಕಾರ್ಯಕ್ರಮ ಶುರು ಮಾಡಿದ್ದೇವೆ. 25 ಸಾವಿರ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. 12 ಕೋಟಿ ಹಣ ಇದಕ್ಕೆ ಖರ್ಚು ಮಾಡ್ತಿದ್ದೇವೆ. ಈ ವರ್ಷದಿಂದಲೇ ತರಬೇತಿ ಕಾರ್ಯಕ್ರಮ ನಡೆಯಲಿದೆ. ಆನ್‌ಲೈನ್‌ನಲ್ಲೂ ತರಬೇತಿ ನಡೆಯಲಿದೆ ಎಂದು ತಿಳಿಸಿದರು.
25 ಸಾವಿರ ವಿದ್ಯಾರ್ಥಿಗಳ ಅಯ್ಕೆ ಮಾಡಲು ಇಲಾಖೆ ಪರೀಕ್ಷೆ ನಡೆಯಲಿದೆ. ಇಲ್ಲಿ ಪಾಸ್ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ಉಚಿತವಾಗಿ ಸರ್ಕಾರದ ಕಡೆಯಿಂದ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.
ಇದಲ್ಲದೇ, 8, 9, 10 ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ. 93 ತಾಲೂಕಿನ 8 ಲಕ್ಷ ವಿದ್ಯಾರ್ಥಿಗಳಿಗೆ ಇದರ ಅನುಕೂಲ ಆಗಲಿದೆ ಎಂದು ತಿಳಿಸಿದರು.