ಮಹಾಕುಂಭ ಮೇಳದಲ್ಲಿ ಮಹಿಳಾ ಭಕ್ತರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜಗತ್ತಿನ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಮೇಳ ನಡೆಯುತ್ತಿದೆ.ಕುಂಭಮೇಳದಲ್ಲಿ ಮಹಿಳಾ ಭಕ್ತರಿಗೆರಿಗೆ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸುತ್ತಿದ್ದು, ಈ ವಿಡಿಯೋವೊಂದು ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.

Shethepeopletv ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಕುಂಭ ಮೇಳದಲ್ಲಿ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿದರು ಎಂದು ಶೀರ್ಷಿಕೆಯನ್ನು ಬರೆಯಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚುವುದನ್ನು ನೋಡಬಹುದು. ಕಿತ್ತಳೆ ಬಣ್ಣದ ಪ್ಯಾಕ್ ನಲ್ಲಿ ಪ್ಯಾಡ್ ಗಳಿದ್ದು ಕೆಲವರು ಹೆಚ್ಚುವರಿ ಪ್ಯಾಡ್ ಗಳನ್ನು ಪಡೆಯುತ್ತಿರುವುದನ್ನು ಕಾಣಬಹುದಾಗಿದೆ.

ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಕಾಮೆಂಟ್ ಗಳ ಸುರಿಮಳೆ ಗೈದಿದ್ದಾರೆ. ಬಳಕೆದಾರರೊಬ್ಬರು, ಇದೊಂದು ಉತ್ತಮವಾದ ಕೆಲಸ ಎಂದಿದ್ದಾರೆ. ಮತ್ತೊಬ್ಬರು, ‘ಮಹಾಕುಂಭಮೇಳಕ್ಕೆ ಗ್ರಾಮೀಣ ಭಾಗದಿಂದಲೂ ಸಾಕಷ್ಟು ಮಹಿಳೆಯರು ಬರುತ್ತಿದ್ದಾರೆ. ಈ ರೀತಿಯ ಕೆಲಸವು ನಿಜಕ್ಕೂ ಮೆಚ್ಚುಗೆಗೆ ಪಾತ್ರವಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ.

 

View this post on Instagram

 

A post shared by SheThePeople (@shethepeopletv)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!