ಉಚಿತವಾಗಿ ಸಿಗುತ್ತೆ ಹೊಲಿಗೆ ಯಂತ್ರ: ಮಹಿಳೆಯರಾಗಲಿದ್ದಾರೆ ಇನ್ನಷ್ಟು ಬಲಿಷ್ಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇನ್ನೊಬ್ಬರ ಮೇಲೆ ಅವಲಂಬಿತವಾಗದೆ ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರ ಜಾರಿ ಮಾಡಿರುವ ಈ ಯೋಜನೆಯ ಲಾಭವನ್ನು ನೀವೂ ಪಡೆಯಬಹುದು. ‘ಉಚಿತ ಹೊಲಿಗೆ ಯಂತ್ರ ಯೋಜನೆ 2022’ ರ ಮೂಲಕ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಪ್ರತಿ ರಾಜ್ಯದ 50 ಸಾವಿರ ಮಹಿಳೆಯರು ಉಚಿತ ಹೊಲಿಗೆ ಯಂತ್ರಗಳನ್ನು ಪಡೆಯಬಹುದು.

ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರ ಪಡೆಯಿರಿ

ಈ ಯೋಜನೆಗೆ ಅರ್ಹರಾಗಿರುವ ಮಹಿಳೆಯು ಅರ್ಜಿ ಸಲ್ಲಿಸುವ ಮೂಲಕ ಹೊಲಿಗೆ ಯಂತ್ರ ಯೋಜನೆಯ ಲಾಭವನ್ನು ಪಡೆಯಬಹುದು. 20 ರಿಂದ 40 ವರ್ಷದೊಳಗಿನ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಬಡವರು ಮತ್ತು ಕೂಲಿ ಕಾರ್ಮಿಕ ಮಹಿಳೆಯರಿಗೆ ಮೊದಲ ಆದ್ಯತೆ ಇದೆ.  ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯು ಕರ್ನಾಟಕ, ಹರಿಯಾಣ, ಗುಜರಾತ್, ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿ ಚಾಲನೆಯಲ್ಲಿದೆ.

ಅರ್ಜಿ ಸಲ್ಲಿಸುವುದು ಹೇಗೆ..?

ಇದಕ್ಕಾಗಿ ಮಹಿಳೆಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮೊದಲು ಅಧಿಕೃತ ವೆಬ್‌ಸೈಟ್ www.india.gov.in ಗೆ ಭೇಟಿ ನೀಡಿ, ಮುಖಪುಟದಲ್ಲಿ ಹೊಲಿಗೆಯ ಉಚಿತ ಪೂರೈಕೆಗಾಗಿ ಅರ್ಜಿ ಸಲ್ಲಿಸಲು ನೀವು ಲಿಂಕ್ ಕ್ಲಿಕ್‌ ಮಾಡಿದರೆ ಅರ್ಜಿ ಸಿಗುತ್ತದೆ. ಅರ್ಜಿ ನಮೂನೆಯ PDFನ ಪ್ರಿಂಟ್ ಔಟ್ ತೆಗೆದುಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ. ನಂತರ ಅರ್ಜಿಯನ್ನು ಸಂಬಂಧಪಟ್ಟ ಕಚೇರಿಗೆ ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಆಧಾರ್ ಕಾರ್ಡ್, ಜನ್ಮ ದಿನಾಂಕ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಮೊಬೈಲ್ ನಂಬರ್, ಪಾಸ್ಪೋರ್ಟ್ ಗಾತ್ರದ ಫೋಟೋ ಅರ್ಜಿದಾರರು ದಿವ್ಯಾಂಗ ಮಹಿಳೆಯರು ಅಥವಾ ವಿಧವೆಯಾಗಿದ್ದರೆ, ಅವರು ಸಂಬಂಧಿತ ಪ್ರಮಾಣಪತ್ರವನ್ನು ಹೊಂದಿರಬೇಕು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!