ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಠ, ಮಂದಿರ, ಧಾರ್ಮಿಕ ಕೇಂದ್ರಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಆಗ್ರಹಿಸಿದರು.
ರಾಯಚೂರಿನಲ್ಲಿ ರಾಷ್ಟ್ರಧರ್ಮ ಪಾಲನಾ ಸಮಿತಿ ಸ್ಥಾಪನೆ ಕುರಿತು ಮಂತ್ರಾಲಯ ಶ್ರೀಗಳು ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ವಿದ್ಯಾರ್ಥಿಗಳು, ಭಕ್ತರು, ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆಯುತ್ತಿತ್ತು. ಇದೆಲ್ಲವನ್ನೂ ಈಗ ಸರ್ಕಾರವು ಲೌಕಿಕ ಕಾನೂನುಗಳ ಮೂಲಕ ನಿಯಂತ್ರಿಸುತ್ತದೆ. ತಿರುಪತಿ ಲಡ್ಡು ಘಟನೆಯಂತಹ ವಿಚಾರಗಳು ಸರ್ಕಾರದ ನೀತಿ ಚೌಕಟ್ಟಿನಲ್ಲೇ ನಡೆದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಯಾ ಪ್ರಾಂತದ ಮಠ, ದೇವಾಲಯಗಳು ಅಲ್ಲಿನ ಜನರ ನೇತೃತ್ವದಲ್ಲಿ ನಡೆಯಬೇಕು ಎಂದು ಒತ್ತಾಯಸಿದ್ದಾರೆ.