Monday, October 2, 2023

Latest Posts

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ ಕಲ್ಪಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಗರ, ಹೊರ ವಲಯ, ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಕ್ಕೆ ಅನುಮತಿ ನೀಡಿದೆ.

ಜೂನ್ 12ರಿಂದ 19ರ ವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ವಾಪಸ್ ತೆರಳುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!