ಹೊಸದಿಗಂತ ಡಿಜಿಟಲ್ ಡೆಸ್ಕ್
ಬಿಜೆಪಿ ಚುನಾವಣೆಯಲ್ಲಿ ಗೆದ್ದರೆ ತೆಲಂಗಾಣದಲ್ಲಿ ಧರ್ಮ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಮತ್ತು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗ (ಒಬಿಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಕೋಟಾವನ್ನು ಹೆಚ್ಚಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಗದ್ವಾಲ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,ತೆಲಂಗಾಣದ ಮುಂದಿನ ಸಿಎಂ ಹಿಂದುಳಿದ ವರ್ಗದವರೇ ಆಗಿರುತ್ತಾರೆ ಎಂದು ಮೋದಿಜಿ ಘೋಷಿಸಿದ್ದಾರೆ, ಹಿಂದುಳಿದ ವರ್ಗಕ್ಕೆ ಸೇರಿದ ಮೊದಲ ಮುಖ್ಯಮಂತ್ರಿಯನ್ನು ನಿಮಗೆ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಶಾ ಹೇಳಿದರು.
ಇದರ ಜೊತೆಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದ ಜನರನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ಉಚಿತವಾಗಿ ಕರೆದೊಯ್ಯಲಾಗುವುದು ಘೋಷಿಸಿದ್ದಾರೆ.
ಕಳೆದ 70 ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿತ್ತು.ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ರಾಮ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, 2024ರ ಜನವರಿ 22ರಂದು ದೇವಸ್ಥಾನವನ್ನು ಉದ್ಘಾಟನೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.