Tuesday, November 4, 2025

ಮಹಿಳೆಯರಿಗೆ 2,500 ರೂ, 25 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ: ಬಿಹಾರ ಜನತೆಗೆ ಮಹಾಘಟಬಂಧನ್ ಗ್ಯಾರಂಟಿ ಘೋಷಣೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ವಿಧಾನಸಭಾ ಚುನಾವಣೆಗೆ ಕರ್ನಾಟಕ ಮಾದರಿಯ ಗ್ಯಾರಂಟಿಗಳನ್ನು ನೀಡಿಮತದಾರರನ್ನು ಸೆಳೆಯಲು ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ ಮುಂದಾಗಿದೆ.

ಪಾಟ್ನಾದಲ್ಲಿ ಪ್ರಣಾಳಿಕೆ ಬಿಡುಗಡೆಗೆ ಮುನ್ನ, ಕಾಂಗ್ರೆಸ್ ನಾಯಕ ಕೃಷ್ಣ ಅಲ್ಲವರು ಬಿಹಾರ ಜನತೆಗೆ ಮಹಾಘಟಬಂಧನ್‌ನ ಪ್ರಮುಖ ಭರವಸೆಗಳ ಕುರಿತು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಭೂರಹಿತ ಕುಟುಂಬಗಳಿಗೆ ಭೂಮಿ (3-5 ಡಿಸ್ಮಿಲ್ = 1300-2176 square feet) ನೀಡಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!