Wednesday, July 6, 2022

Latest Posts

ಕೊರೋನಾ ನಿಯಂತ್ರಣಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆಗೆ ಅಷ್ಠಗಿ ಸ್ವಾಗತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಕಲಬುರಗಿ:

ದೇಶದ ಎಲ್ಲ ರಾಜ್ಯಗಳ 18 ವರ್ಷದ ಮೇಲ್ಪಟ್ಟ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದೆ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಈ ಒಂದೇ ವರ್ಷದಲ್ಲಿ ಎರಡು ಲಸಿಕೆಗಳನ್ನು ಕಂಡು ಹಿಡಿದಿರುವುದು,ದೇಶದ ವಿಜ್ಞಾನಿಗಳ ಬದ್ಧತೆಯಯನ್ನು ತೋರಿಸುತ್ತದೆ.
ಈ ಸ್ವದೇಶಿ ಹಾಗೂ ಇತರೆ ಲಸಿಕೆಗಳಿಂದ ದೇಶದಲ್ಲಿ 23 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲು ಅನುಕೂಲವಾಗಿದ್ದು; ಇದೀಗ ಕೋವಿಡ್ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ ಎಂದು ಪ್ರಧಾನಿಯವರು ವಿಶ್ವಾಸ ವ್ಯಕ್ತಪಡಿಸಿರುವುದು ದೇಶದ ನಾಗರಿಕರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಅಂಬಾರಾಯ ಅಷ್ಠಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss