ಹೊಸದಿಗಂತ ಡಿಜಿಟಲ್ ಡೆಸ್ಕ್:
78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದಲ್ಲಿ 2,500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಮಾಡಲಾಗಿತ್ತು. ಡಿಸಿ ಕಚೇರಿ ಮುಂಭಾಗದಿಂದ ಎನ್.ಆರ್ ವೃತ್ತ, ಹೇಮಾವತಿ ಪ್ರತಿಮೆ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ನಗರದ ಪ್ರಮುಖ ರಸ್ತೆಗಳಲ್ಲಿ 3,000 ವಿದ್ಯಾರ್ಥಿಗಳು ಭಾರತದ ಬಾವುಟ ಹಿಡಿದು ಸಾಗಿದರು.