ಸ್ವಾತಂತ್ರ್ಯ ಹೋರಾಟಗಾರ, ಸಿಪಿಎಂ ನಾಯಕ ಎನ್. ಶಂಕರಯ್ಯ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭಾರತ ಕಮ್ಯುನಿಸ್ಟ್ ಪಕ್ಷದ (Marxist) ಶತಾಯುಷಿ ಎನ್‌ ಶಂಕರಯ್ಯ (102 ) ಇಂದು ಚೆನ್ನೈ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜ್ವರ ಮತ್ತು ಶೀತದ ಹಿನ್ನೆಲೆ ಸೋಮವಾರದಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಿರಿಯ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಅಂತಿಮ ವಿಧಿವಿಧಾನದ ವೇಳೆ ಶಂಕರಯ್ಯ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವ ಸಲ್ಲಿಸಲಾಗುವುದು ಎಂದು ಘೋಷಿಸಿದರು.

1921ರಲ್ಲಿ ತೂತುಕುಡಿಯಲ್ಲಿ ಜನಿಸಿದ ಶಂಕರಯ್ಯನವರು ಮಧುರೈನ ಅಮೆರಿಕನ್ ಕಾಲೇಜಿನಲ್ಲಿ ಇತಿಹಾಸವನ್ನು ಅಧ್ಯಯನ ಮಾಡಿದರು. ಅವರು ಸುದೀರ್ಘ ಮತ್ತು ಪ್ರಸಿದ್ಧ ರಾಜಕೀಯ ವೃತ್ತಿಜೀವನವನ್ನು ಹೊಂದಿದ್ದರು. ಅಲ್ಲದೆ ಎಂಟು ವರ್ಷಗಳನ್ನು ಜೈಲಿನಲ್ಲಿ ಕಳೆದರು. 1947ರ ಆಗಸ್ಟ್ ನಲ್ಲಿ ಭಾರತದ ಸ್ವಾತಂತ್ರ್ಯದ ಮುನ್ನಾದಿನದಂದು ಬಿಡುಗಡೆಗೊಂಡ ಕಮ್ಯುನಿಸ್ಟರಲ್ಲಿ ಅವರೂ ಒಬ್ಬರಾಗಿದ್ದರು. 1995 ರಿಂದ 2002ರ ವರೆಗೆ ತಮಿಳುನಾಡು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿದ್ದರು.

ಶಂಕರಯ್ಯ ಅವರು ಮಧುರೈ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!