ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಮಂಗಳೂರು:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿದೆ. ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲು ಆಗಮಿಸಿದ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದರು.
ಪ್ರಕರಣದ ತನಿಖೆಯಲ್ಲಿ ಕೇರಳದ ಪೊಲೀಸರ ಜತೆ ನಿರಂತರ ಸಂಪರ್ಕ ಇರಿಸಿಕೊಳ್ಳಲಾಗಿದೆ. ಪೊಲೀಸರು ತಮ್ಮದೇ ಆದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಅರೋಪಿಗಳಿಗೆ ಕಾನೂನು ರೀತಿಯಲ್ಲಿ ಉಗ್ರ ಶಿಕ್ಷೆ ನೀಡಲಾಗುವುದು ಎಂದರು.
ಬಂಧಿತರು ಯಾವ ಸಂಘಟನೆಗೆ ಸೇರಿದವರು ಎಂಬುದು ಗೊತ್ತಿಲ್ಲ. ತನಿಖೆ ವೇಳೆ ಎಲ್ಲ ವಿಷಯ ಬಹಿರಂಗಪಡಿಸಲಾಗದು. ತನಿಖೆ ಪೂರ್ಣಗೊಂಡ ಬಳಿಕ ಎಲ್ಲ ವಿಷಯ ತಿಳಿಯಲಿದೆ ಎಂದು ಸಿಎಂ ಹೇಳಿದರು.
ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಪ್ರವೀಣ್ ಮನೆಗೆ ಭೇಟಿ ನೀಡಿ, ಮನೆಯವರ ಜತೆ ಮಾತನಾಡಿದ ಬಳಿಕ ನಿರ್ಧರಿಸಲಾಗುವುದು ಎಂದರು.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಅರಗ ಜ್ಣಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರತಾಳು ಹಾಲಪ್ಪ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!