ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಎರಡು ಸರಕು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಲೋಕೋ ಪೈಲಟ್‌ಗಳು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯುತ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ನಿರ್ವಹಿಸುವ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಬರ್ಹೈಟ್ ಪೊಲೀಸ್ ಠಾಣೆ ಪ್ರದೇಶದ ಭೋಗ್ನದಿಹ್ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಹಳಿಗಳು ಸಹ ಎನ್‌ಟಿಪಿಸಿ ಒಡೆತನದ್ದಾಗಿದ್ದು, ಮುಖ್ಯವಾಗಿ ಅದರ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಿಸಲು ಬಳಸಲಾಗುತ್ತದೆ. ಈ ಬೆಳವಣಿಗೆಯನ್ನು ದೃಢಪಡಿಸಿದ ಸಾಹಿಬ್‌ಗಂಜ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಸಿಂಗ್, ಘಟನೆಯಲ್ಲಿ ಇಬ್ಬರೂ ಚಾಲಕರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ.
ಅಪಘಾತದ ನಂತರ, ಬೆಂಕಿ ಕಾಣಿಸಿಕೊಂಡಿದ್ದು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿ, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.