ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿಯ ಮಹಿಳಾ ಸಿಂಗಲ್ಸ್ ಚಾಂಪಿಯನ್ ನಲ್ಲಿ ವಿಶ್ವದ ನಂ.1 ಆಟಗಾರ್ತಿ ಪೋಲೆಂಡ್‌ನ ಇಗಾ ಸ್ವಿಯಾಟೆಕ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಫೈನಲ್ ಹಣಾಹಣಿಯಲ್ಲಿ ಸ್ವಿಯಾಟೆಕ್, ಅಮೆರಿಕದ ಕೊಕೊ ಗಾಫ್ ಮಣಿಸಿ ಪ್ರಶಸ್ತಿಗೆ ಮುತ್ತಿಕ್ಕಿದರು.
ರೋಲ್ಯಾಂಡ್ ಗ್ಯಾರೋಸ್ ಫೈನಲ್‌ನಲ್ಲಿ ಇಗಾ ಸ್ವಿಯಾಟೆಕ್ 18ರ ಹರೆಯದ ಕೊಕೊ ಗೌಫ್ ಅವರನ್ನು 6-1, 6-3 ನೇರ ಸೆಟ್‌ಗಳಿಂದ ಸೋಲಿಸಿದರು.