ಹೊಸದಿಗಂತ ಡಿಜಿಟಲ್ ಡೆಸ್ಕ್:
26 ಜನವರಿ 2024 ರಂದು ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಪ್ರಧಾನಿ ಮೋದಿ ಆಹ್ವಾನ ನೀಡಿದ್ದು, ಅವರ ಆಗಮನ ಬಹುತೇಕ ಖಚಿತವಾಗಿದೆ.
ಈ ಕುರಿತು ವಿದೇಶಾಂಗ ಸಚಿವಾಲಯ ಶುಕ್ರವಾರ ದೃಢಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದೆ.
ಇನ್ನು ಭಾರತದಿಂದ ಬಂದ ಆಹ್ವಾನಕ್ಕಾಗಿ ಎಮ್ಯಾನುಯೆಲ್ ಮ್ಯಾಕ್ರನ್ ತಮ್ಮ ಅಧಿಕೃತ ಪೋಸ್ಟ್‌ನಲ್ಲಿ ಧನ್ಯವಾದ ತಿಳಿಸಿದ್ದು, ‘ನಿಮ್ಮ ಆಹ್ವಾನಕ್ಕೆ ಧನ್ಯವಾದಗಳು, ಗಣರಾಜ್ಯ ದಿನದಂದು ನನ್ನ ಆತ್ಮೀಯ ಸ್ನೇಹಿತನರೇಂದ್ರ ಮೋದಿ, ಭಾರತ ಜೊತೆ ಆಚರಿಸಲು ನಾನು ಇರುತ್ತೇನೆ’ ಎಂದು ಹೇಳಿದ್ದಾರೆ.