ಇಂದು ಭಾರತಕ್ಕೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ 5:30ಕ್ಕೆ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಎರಡೂ ದೇಶಗಳ ನಾಯಕರು ನಗರದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಮ್ಯಾಕ್ರನ್ ವೇಳಾಪಟ್ಟಿ: ಮಧ್ಯಾಹ್ನ 2:30: ಮ್ಯಾಕ್ರನ್ ಜೈಪುರ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3:15 ಕ್ಕೆ ಆಗಮಿಸುತ್ತಾರೆ ಮತ್ತು ಅಮೇರ್ ಕೋಟೆಗೆ ಭೇಟಿ ನೀಡುತ್ತಾರೆ. ಸಂಜೆ 5:30ಕ್ಕೆ ಜಂತರ್ ಮಂತರ್ ಭೇಟಿ. ಸಂಜೆ 6 ಗಂಟೆಗೆ ಪಥಸಂಚಲನದಲ್ಲಿ ಪಾಲ್ಗೊಳ್ಳುವರು. ನಂತರ ಸಂಜೆ 6:15ಕ್ಕೆ ಹವಾ ಮಹಲ್ ಗೆ ಭೇಟಿ ನೀಡಿ 7:15ಕ್ಕೆ ಪ್ರಧಾನಿ ಜತೆ ಸಭೆ ನಡೆಸಲಿದ್ದಾರೆ. 20:50ಕ್ಕೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲೆಂದು ಭಾರತಕ್ಕೆ ಭೇಟಿ ಕೊಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!