August 31, 2026
Monday, August 31, 2026
spot_img

ಮುಂಬೈಗೆ ಬಂದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನಲ್ಲಿ ಇಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ಉಭಯ ನಾಯಕರು ಲೋಕಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು.

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ನಡುವಿನ ಸಭೆಯು ಕಾರ್ಯತಂತ್ರದ ಸಹಕಾರ, ವ್ಯಾಪಾರ, ರಕ್ಷಣಾ ಸಹಯೋಗ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಮೇಲೆ ಮಾತುಕತೆ ನಡೆದಿರುವ ಸಾಧ್ಯತೆಯಿದೆ.

ಭಯೋತ್ಪಾದನೆಯ ವಿರುದ್ಧ ಅಂತಾರಾಷ್ಟ್ರೀಯ ಒಗ್ಗಟ್ಟನ್ನು ಪ್ರತಿಬಿಂಬಿಸುವ ಸಂಕೇತವಾಗಿ ಮ್ಯಾಕ್ರೋನ್ 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !