ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 1121 ಮಂದಿಗೆ ಕೊರೋನಾ ವೈರಸ್ ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 1121 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 996 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 83 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 54,537 ಹೊಸ ಪ್ರಕರಣ

ಕೇರಳದಲ್ಲಿ ಶುಕ್ರವಾರ ಹೊಸದಾಗಿ 54,537 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 50,295 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 30,225 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 13 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 47.05 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!