Tuesday, August 9, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 720 ಜನರಲ್ಲಿ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..

ಹೊಸ ದಿಗಂತ ವರದಿ. ಶಿವಮೊಗ್ಗ:

ಜಿಲ್ಲೆಯಲ್ಲಿ ಶುಕ್ರವಾರ ಕೊರೋನ ಪಾಸಿಟಿವ್ ಹಾಗೂ ಮರಣ ಸಂಖ್ಯೆ ಸ್ವಲ್ಪ ಇಳಿಮುಖವಾಗಿದೆ. 720 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 557 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ 5 ಜನ ಮೃತಪಟ್ಟಿದ್ದು, ಮೃತರ ಸಂಖ್ಯೆ 557 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 209, ಭದ್ರಾವತಿ 103, ಶಿಕಾರಿಪುರ 41, ತೀರ್ಥಹಳ್ಳಿ 61, ಸೊರಬ 78, ಸಾಗರ 171, ಹೊಸನಗರ 31 ಹಾಗೂ ಹೊರ ಜಿಲ್ಲೆಯ 26 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ 7277 ಕ್ಕೆ ಏರಿಕೆಯಾಗಿವೆ. 1555 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 600 ಜನ, ಖಾಸಗಿ ಆಸ್ಪತ್ರೆಯಲ್ಲಿ 508 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 325 ಜನರಿದ್ದು, ಡಿಸಿಎಚ್ ಸಿಯಲ್ಲಿ 356 ಜನ ಹಾಗೂ
4835 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss