ಸೋಶಿಯಲ್‌ ಮೀಡಿಯಾದಲ್ಲಿ ಫ್ರೆಂಡ್‌ಶಿಪ್‌: ಮದುವೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮ್ಯಾರೀಡ್‌ ಮ್ಯಾನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಾಮಾಜಿಕ ಮಾಧ್ಯಮದ ಮೂಲಕ ಸ್ನೇಹ ಬೆಳೆಸಿದ್ದ ವಿವಾಹಿತ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

27 ವರ್ಷದ ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಅರವಿಂದ್ ಜೈನ್ ತಿಳಿಸಿದ್ದಾರೆ.

ವ್ಯಕ್ತಿಯು ಬಾಲಕಿಯೊಂದಿಗೆ ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಇಬ್ಬರು ಫೋನ್‌ನಲ್ಲಿ ಪರಸ್ಪರ ಮಾತನಾಡುತ್ತಿದ್ದರು. ಶಹದೋಲ್ ಜಿಲ್ಲೆಯ ಅಮ್ಲೈ ನಿವಾಸಿಯಾಗಿರುವ ಆರೋಪಿ ವಿರುದ್ಧ ಸೋಮವಾರ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!