ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಚಿತ್ರದುರ್ಗ:
ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳುವ ಉದ್ದೇಶದಿಂದ 1949 ಜುಲೈ 9 ರಂದು ಅಖಿಲ
ಭಾರತೀಯ ವಿದ್ಯಾರ್ಥಿ ಪರಿಷತ್ತನ್ನು ಸ್ಥಾಪಿಸಲಾಯಿತು ಎಂದು ಎಬಿವಿಪಿ ಜಿಲ್ಲಾಧ್ಯಕ್ಷ ಗಂಗಾಧರ್ ತಿಳಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಗರದ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜ್ಞಾನ, ಶೀಲ, ಏಕತೆ ಎನ್ನುವ ಘೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳನ್ನು ರಾಷ್ಟ್ರ ನಿರ್ಮಾಣದ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಮಾಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ವಿಶ್ವದ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಗಳಲ್ಲಿ ಒಂದಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ದೇಶ ಭಕ್ತಿ ತುಂಬಿಸುವ ಈ ಸಂಘಟನೆ ವಿದ್ಯಾರ್ಥಿಗಳ ಪರವಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಲೇಪಾಕ್ಷಿ, ಎಬಿವಿಪಿ ನಗರ ಕಾರ್ಯದರ್ಶಿ ಅವಿನಾಶ್, ಸಹ ಕಾರ್ಯದರ್ಶಿ ಅಜಯ್, ಆದರ್ಶ್, ಚಂದ್ರಶೇಖರ್, ಮನೋಜ್, ಚೇತನ್ ಮತ್ತಿತರರು ಭಾಗವಹಿಸಿದ್ದರು.