ಹೊಸ ದಿಗಂತ ವರದಿ, ಬಳ್ಳಾರಿ:
ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪನೆ, ಸರ್ಕಾರದಿಂದ ವಾಲ್ಮೀಕಿ ಜಯಂತ್ತ್ಯುತ್ಸವ ಆಚರಣೆ ಹಾಗೂ ಅಂದು ರಜೆ, ಪರಿಶಿಷ್ಟ ವರ್ಗಗಳ ಸಚಿವಾಲಯ ಸ್ಥಾಪನೆ ಮಾಡಿದ್ದು, ನಮ್ಮ ಬಿಜೆಪಿ ಸರ್ಕಾರ, ಮುಳುಗುವ ಹಡಗಿನಂತಾದ ಕಾಂಗ್ರೆಸ್ ನಿಂದ ಎಸ್ಟಿ ಹಾಗೂ ಎಸ್ಸಿ ವರ್ಗದವರಿಗೆ ಯಾವುದೇ ಕೊಡುಗೆ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಹೇಳಿದ್ದಾರೆ.
ನಗರದ ಕ್ಲಾಸಿಕ್ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಎಸ್ಟಿ ಮೋರ್ಚಾ ರಾಜ್ಯಮಟ್ಟದ ಸಮಾವೇಶ ಹಿನ್ನೆಲೆ ಹಮ್ಮಿಕೊಂಡಿದ್ದ ಬಿಜೆಪಿ ಪ್ರಭಂದಕರ ಸಭೆಯಲ್ಲಿ ಮಾತನಾಡಿದರು.
ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರಿರಾಮುಲು ಮಾತನಾಡಿ, ಎಸ್ಸಿ ಹಾಗೂ ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ನಮ್ಮ ಬಿಜೆಪಿ ಸರ್ಕಾರ ಇತಿಹಾಸ ಸೃಷ್ಟಿಸಿದೆ. ಕಾಂಗ್ರೆಸ್ ನವರು ಹೆಚ್ಚು ಅವಧಿಯಲ್ಲಿ ಆಡಳಿತ ನಡೆಸಿದರೂ ಮೀಸಲಾತಿ ಹೆಚ್ಚಳ ಮಾಡುವಲ್ಲಿ ಸಾಧ್ಯವಾಗಿರಲಿಲ್ಲ, ಅದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡುವ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಬೀತು ಪಡಿಸಿದೆ, ನಗರದಲ್ಲಿ ನ.20ರಂದು ಎಸ್ಟಿ ಮೋರ್ಚಾ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿದ್ದು, ಈ ಸಮಾವೇಶದ ಯಶಸ್ವಿಗೆ ಪ್ರತಿಯೋಬ್ಬರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ನಂತರ ಭಾಗವಹಿಸಿದ್ದ ಬಿಜೆಪಿಯ ಎಲ್ಲ ಪ್ರಭಂದಕರಿಗೆ ಕಾರ್ಯಕ್ರಮದ ಯಶಸ್ವಿ ಕುರಿತು ಅಗತ್ಯ ಸೂಚನೆ, ಸಲಹೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಣಿ ಮತ್ತು ಮಹಿಳಾ ಮಕ್ಕಳ ಇಲಾಖೆ ಸಚಿವ ಹಾಲಪ್ಪ ಆಚಾರ್, ಕೊಪ್ಪಳ ಸಂಸದ ಅಶ್ವಥ್ ನಾರಾಯಣ್, ಸಂಗಣ್ಣ, ಸಂದ ವೈ.ದೇವೇಂದ್ರಪ್ಪ, ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಸಿರಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರಾದ ಮುರಹರಗೌಡ, ಮಾಜಿ ಸಚಿವ ಶಿವನಗೌಡ ನಾಯಕ್, ಶಾಸಕರಾದ ರಾಜೂಗೌಡ, ಗೋಪಾಲಕೃಷ್ಣ, ಹೇಮಲತಾ ನಾಯಕ್, ಮಾಜಿ ಶಾಸಕರಾದ ನೇಮಿರಾಜ್ ನಾಯಕ್, ಸುರೇಶ್ ಬಾಬು, ಚಂದ್ರಾನಾಯಕ್, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಓಬಳೇಶ್ ಸಂಡೂರು, ಬಿ.ಶಿವಕುಮಾರ್, ಓಬಳೇಶ್, ಸೇರಿದಂತೆ ಪಕ್ಷದ ಅನೇಕ ಮುಖಂಡರು, ಪ್ರಬಂಧಕರು ಉಪಸ್ಥಿತರಿದ್ದರು.