ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾದಿಂದ ಜೀವಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಪ್ರಧಾನಿ ಸೂಚನೆ: ಸಚಿವ ಈಶ್ವರಪ್ಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಶಿವಮೊಗ್ಗ:

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ವಿಡಿಯೋ ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪಾಲ್ಗೊಂಡು ಗಮನ ಸೆಳೆದರು.
ಕೊರೋನಾ ನಿರ್ವಹಣೆಗೆ ಕೈಗೊಂಡ ಕ್ರಮಗಳು, ಈಗಿನ ಸ್ಥಿತಿಗತಿ ಮೊದಲಾದ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ವೀಡಿಯೋ ಸಂವಾದ ನಡೆಸಿದರು.
ಪೂರ್ಣ ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡಿದ್ದರು. ಪ್ರಧಾನಿಯೊಂದಿಗಿನ ವೀಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಕೊರೋನಾ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು ಐದು ರಾಜ್ಯಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಮ್ಮ ಜಿಲ್ಲೆಯಲ್ಲಿ ಕೊರೋನಕ್ಕೆ ಸಂಬಂಧಿಸಿದಂತೆ ಯಾವುದೇ ಬೇಡಿಕೆ ಇಲ್ಲವೇ ಕೊರತೆಯನ್ನು ಪ್ರಧಾನಿ ಮುಂದೆ ಮಂಡಿಸಿಲ್ಲ. ಕೊರೋನಾದಿಂದ ಯಾವುದೇ ಜೀವಕ್ಕೆ ಹಾನಿಯಾಗದಂತೆ ಎಲ್ಲಾ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರತಿಕ್ರಿಯಿಸಿ, ಪ್ರಧಾನಿ ಅವರು ನಮ್ಮ ಜಿಲ್ಲೆಯ ಬಗ್ಗೆ ಯಾವುದೇ ಮಾಹಿತಿ ಪಡೆದಿಲ್ಲ. ಅವರು ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಈಗಾಗಲೇ ಮಾರ್ಗಸೂಚಿ ಪ್ರಕಾರ ಕೆಲವನ್ನು ಪಾಲನೆ ಮಾಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲೂ ಅನೇಕ ಸಂಗತಿಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು.
ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಜಿಲ್ಲಾ ಲಸಿಕಾಧಿಕಾರಿ ಡಾ.ನಾಗರಾಜ ನಾಯ್ಕ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಕೂಡಾ ಈ ವೇಳೆ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss