ಸ್ವಾತಂತ್ರ್ಯ ಹೋರಾಟ, ರಾಷ್ಟ್ರ ನಿರ್ಮಾಣದವರೆಗೆ ಮಹಿಳೆಯ ಸಾಮರ್ಥ್ಯ ಅದ್ಭುತ: ಪ್ರಿಯಾಂಕಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಭಾರತ ಮಹಿಳೆಯರಿಗೆ ಶುಭ ಕೋರಿದ್ದಾರೆ. ದೇಶವನ್ನು ಹೆಚ್ಚು ಶಕ್ತಿಶಾಲಿಯಾಗಿಸಲು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಮತ್ತು ಭಾಗವಹಿಸುವಿಕೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ ಗಾಂಧಿ, ದೇಶಾದ್ಯಂತ ನಮ್ಮ ಎಲ್ಲಾ ಸಹೋದರಿಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು. ಸ್ವಾತಂತ್ರ್ಯ ಹೋರಾಟದಿಂದ ರಾಷ್ಟ್ರ ನಿರ್ಮಾಣದವರೆಗೆ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಭಾಗವಹಿಸಿ, ತಮ್ಮ ಪ್ರಬಲ ನಾಯಕತ್ವದ ಸಾಮರ್ಥ್ಯಗಳನ್ನು ಸಾಬೀತುಪಡಿಸಿದ್ದಾರೆ.

ಇಂದು, ಮಹಿಳೆಯರ ಪಾತ್ರ ಮತ್ತು ಭಾಗವಹಿಸುವಿಕೆಯನ್ನು ಇನ್ನಷ್ಟು ಹೆಚ್ಚಿಸುವ ಅವಶ್ಯಕತೆಯಿದೆ. ಹೆಚ್ಚು ಮಹಿಳೆಯರು ಮುಂದೆ ಬಂದಂತೆ, ದೇಶವು ಹೆಚ್ಚು ಶಕ್ತಿಶಾಲಿ ಮತ್ತು ಸುಂದರವಾಗುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!