September 17, 2026
Thursday, September 17, 2026
spot_img

ಕೈಗಾರಿಕೆಯಿಂದ ಕ್ರೀಡೆಯವರೆಗೆ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದ ಸಿಎಂ  

ಹೊಸದಿಗತ ವರದಿ ಕಲಬುರಗಿ:

ಕಲ್ಯಾಣ ಕರ್ನಾಟಕ ಪ್ರದೇಶವನ್ನು ಕೈಗಾರಿಕೆ, ತಂತ್ರಜ್ಞಾನ, ಕೃಷಿ ಮೌಲ್ಯವರ್ಧನೆ, ಪ್ರವಾಸೋದ್ಯಮ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದರು.

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಅವರು, ಪ್ರದೇಶದಲ್ಲಿ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ (ಕೆಕೆಇಎಂ) ಅನ್ನು ಸೆಕ್ಷನ್-8 ಕಂಪನಿಯಾಗಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರೈತರ ಆದಾಯ ಹೆಚ್ಚಳಕ್ಕಾಗಿ ಜೈವಿಕ ಆರ್ಥಿಕ ಮಿಷನ್ ಆರಂಭಿಸಲಾಗುವುದು ಎಂದರು.

ಕಲಬುರಗಿಯಲ್ಲಿ 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ನಿರ್ಮಾಣ ಹಾಗೂ ಕೆಆರ್‌ಐವೈಎ (Kalaburagi Research, Innovation and Youth Accelerator) ಸ್ಥಾಪನೆಯ ಮೂಲಕ ಯುವಕರಿಗೆ ನಾವೀನ್ಯತೆ ಮತ್ತು ಸ್ಟಾರ್ಟ್‌ಅಪ್ ಅವಕಾಶಗಳನ್ನು ಕಲ್ಪಿಸಲಾಗುವುದು ಎಂದು ಘೋಷಿಸಿದರು.

ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸೇಡಂ ರಸ್ತೆಯ ರಿಂಗ್‌ರೋಡ್‌ನಲ್ಲಿ ಮೇಲ್ಸೇತುವೆ ನಿರ್ಮಾಣ, ಹೊಸ ಪೆರಿಫೆರಲ್ ರಿಂಗ್‌ರೋಡ್ ಯೋಜನೆ ಹಾಗೂ ₹30 ಕೋಟಿ ವೆಚ್ಚದಲ್ಲಿ ಕೆರೆ ಮತ್ತು ಮನರಂಜನಾ ಉದ್ಯಾನ ಅಭಿವೃದ್ಧಿಪಡಿಸಲಾಗುವುದ.ಜೊತೆಗೆ ಕಲಬುರಗಿ ಜಿಲ್ಲೆಯಲ್ಲಿ ನಿವೇಶನರಹಿತ ಕುಟುಂಬಗಳಿಗೆ 50 ಸಾವಿರ ವಸತಿ ನಿವೇಶನಗಳನ್ನು ಒದಗಿಸುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:

ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಲಬುರಗಿ ಕೋಟೆ, ಶರಣಬಸವೇಶ್ವರ ದೇವಸ್ಥಾನ, ಖ್ವಾಜಾ ಬಂದೇ ನವಾಜ್ ದರ್ಗಾ, ಬುದ್ಧ ವಿಹಾರ, ಮಳಖೇಡ, ಸನ್ನತಿ ಹಾಗೂ ಗಾಣಗಾಪುರವನ್ನು ಸಂಪರ್ಕಿಸುವ ಪುಣ್ಯಯಾತ್ರಾ ಸರ್ಕ್ಯೂಟ್ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಕ್ರೀಡಾ ಕ್ಷೇತ್ರದಲ್ಲಿ ಹಡಗಿಲ್ ಹಾರುತಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಸ್ಪೋರ್ಟ್ಸ್ ಸಿಟಿ ಸ್ಥಾಪನೆ ಹಾಗೂ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಸಮಗ್ರ ಪುನರಾಭಿವೃದ್ಧಿಯನ್ನೂ ಘೋಷಿಸಿದರು.

ಇದಲ್ಲದೆ, ಸಾರ್ವಜನಿಕ ಸುರಕ್ಷತೆಗೆ ಎಐ ಆಧಾರಿತ ಸಿಸಿಟಿವಿ ಜಾಲ ಅಳವಡಿಕೆ, ರಕ್ತಹೀನತೆ ವಿರುದ್ಧ ವಿಶೇಷ ಅಭಿಯಾನ ಹಾಗೂ ಮುಂದಿನ ಎರಡು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಾದ್ಯಂತ ಒಂದು ಕೋಟಿ ಗಿಡಗಳ ನೆಡುವ ಕೋಟಿ ವೃಕ್ಷ ಅಭಿಯಾನ ಕೈಗೊಳ್ಳುವುದಾಗಿ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !