Saturday, August 13, 2022

Latest Posts

ಜುಲೈ 9ರಿಂದ ಮಾಲ್ಗುಡಿ ಡೇಸ್ ಮ್ಯೂಸಿಯಂ ಪುನರಾರಂಭ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ಶಿವಮೊಗ್ಗ:

ಅರಸಾಳು ರೈಲ್ವೆ ನಿಲ್ದಾಣದಲ್ಲಿನ ಮಾಲ್ಗುಡಿ ಡೇಸ್ ಮ್ಯೂಸಿಯಂ ಜುಲೈ 9ರಿಂದ ಪುನರಾರಂಭಗೊಳ್ಳಲಿದೆ.
ಕೊರೋನಾ ಪ್ರಕರಣ ಹೆಚ್ಚಳದ ಹಿನ್ನೆಲೆ ಮ್ಯೂಸಿಯಂನ್ನು ಬಂದ್ ಮಾಡಲಾಗಿತ್ತು. ಅದನ್ನು ಈಗ ಪುನರ್ ಆರಂಭ ಮಾಡಲಾಗುತ್ತಿದೆ
ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ಮ್ಯೂಸಿಯಂ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ತೆರೆದಿರುತ್ತದೆ. ಈ ವೇಳೆ ವೀಕ್ಷಣೆಗೆ ಬರುವ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ರೈಲ್ವೆ ಇಲಾಖೆ ಕೋರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss