Saturday, June 10, 2023

Latest Posts

ಜೂನ್‌ 1 ರಿಂದ ಜು. 31ರ ವರೆಗೆ ಮೀನುಗಾರಿಕೆಗೆ ನಿಷೇಧ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ ಅನ್ವಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ ಸಾಧನಗಳನ್ನು ಉಪಯೋಗಿಸುವ ಎಲ್ಲ ಯಾಂತ್ರೀಕೃತ ದೋಣಿಗಳು ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ ಅಥವಾ ಔಟ್‌ಬೋರ್ಡ್‌ ಯಂತ್ರಗಳ ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ಚಟುವಟಿಕೆಯನ್ನು ಜೂ.1ರಿಂದ ಜು. 31ರ ವರೆಗೆ ನಿಷೇಧವಿರಲಿದೆ.

ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧವಾಗಿರುವುದು ಹಾಗೂ ಮೀನು ಸಂತಾನೋತ್ಪತ್ತಿ ಮಾಡುವ ಹಿನ್ನೆಲೆ ಮೀನುಗಾರಿಕೆ ನಿಷೇಧಿಸಲಾಗಿದೆ. ಮೀನುಗಾರಿಕೆ ನಿಷೇಧಿಸಿದ ಆದೇಶ ಉಲ್ಲಂಘಿಸಿಸುವ ದೋಣಿಗಳು ಮತ್ತು ಮೀನುಗಾರರು ದಂಡನೆಗಳಿಗೆ ಅರ್ಹರಾಗಿದ್ದು, ಕರ್ನಾಟಕ ಸಮುದ್ರ ಮೀನುಗಾರಿಕಾ ನಿಯಂತ್ರಣ ಕಾಯ್ದೆ 1986ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅದರಂತೆ ಒಂದು ವರ್ಷದ ಅವಧಿಗೆ ಡೀಸೆಲ್‌ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!