ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೋವಿಡ್ನಿಂದ ಮೃತಪಟ್ಟ ರೈತರ ಕೃಷಿ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಸಹಕಾರಿ ಸಾಲ ಪಡೆದಿರುವ ರೈತರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಸಹಕಾರ ಸಚಿವ ಮತ್ತು ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಮೊದಲಿಗೆ ಎಷ್ಟು ಜನ ರೈತರು ಮೃತಪಟ್ಟಿದ್ದಾರೆ ಎಂಬುದನ್ನು ಒಂದು ವಾರದಲ್ಲಿ ಮಾಹಿತಿ ಪಡೆದು, ಬಳಿಕ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 4-5 ತಿಂಗಳ ಹಿಂದೆ ಖರೀದಿ ಮಾಡಲಾಗಿದ್ದ ರಾಗಿ, ಭತ್ತ ಹಾಗೂ ಗೋಧಿಗೆ ಬಾಕಿ ಹಣವು ಸುಮಾರು ₹721 ಕೋಟಿಯಷ್ಟಿದ್ದು, ಇದನ್ನು ಇನ್ನು 2-3 ದಿನಗಳಲ್ಲಿ ಪಾವತಿಸುವುದಾಗಿ ಸೋಮಶೇಖರ್ ತಿಳಿಸಿದರು.