ಮಡಿಕೇರಿ ನಗರ ಬಿಜೆಪಿಯಿಂದ ಅಂಬೇಡ್ಕರ್ ಜಯಂತಿ

ಹೊಸ ದಿಗಂತ ವರದಿ, ಮಡಿಕೇರಿ:

ಮಡಿಕೇರಿ ನಗರ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ದಿನದ ಪ್ರಯುಕ್ತ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರ ಅಧ್ಯಕ್ಷ ಮನು ಮಂಜುನಾಥ್, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ನಗರಸಭಾ ಸದಸ್ಯರಾದ ಕಾಳಚಂಡ ಅಪ್ಪಣ್ಣ, ರಮೇಶ್, ಚಂದ್ರಶೇಖರ್, ಕವನ್ , ಮುರುಗನ್, ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾಗಿದ್ದರು.
ಪರಿಶಿಷ್ಟ ಜಾತಿ ಘಟಕ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131 ನೇ ಜನ್ಮ ದಿನವನ್ನು ಮಡಿಕೇರಿ ನಗರ ಬಿಜೆಪಿ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಭರತ್ ಅವರ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಉದ್ಘಾಟಿಸಿದರು.
ಈ ಸಂದರ್ಭ ಬಾಬಾ ಸಾಹೇಬ್ ಅಂಬೇಡ್ಕರ್ ಬಾಲ್ಯ ಮತ್ತು ಹಂತ ಹಂತವಾಗಿ ಅವರು ಆಗಿನ ಕಾಲದಲ್ಲಿ ಅನುಭವಿಸಿದ ತೊಂದರೆಗಳನ್ನು ವಿವರಿಸಿದ ಅವರು, ಅದರ ಪರಿಣಾಮವಾಗಿ ಅವರು ಇಡೀ ವಿಶ್ವ ಮೆಚ್ಚುವಂತಹ ಸಂವಿಧಾನ ವನ್ನು ನೀಡಲು ಸಾಧ್ಯವಾಯಿತು ಎಂದು ತಿಳಿಸಿದರಲ್ಲದೆ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಗುಣಗಾನ ಮಾಡಿದರು.
ನಗರ ಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮತ್ತು ನಗರ ಸಭಾ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಅವರು ಮಾತನಾಡಿ, ಇಡೀ ವಿಶ್ವಕ್ಕೆ ಮಾದರಿ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ವಿವರಣೆ ನೀಡಿದರಲ್ಲದೆ ಬಿಜೆಪಿ ಪ್ರತಿ ವರ್ಷ ಏಪ್ರಿಲ್ 14 ರಂದು ಮೂಲಕ ಸಂವಿಧಾನ ಶಿಲ್ಪಿಯ ಜನ್ಮ ದಿನವನ್ನು ಪ್ರತೀ ಬೂತ್ ಮಟ್ಟದಲ್ಲಿ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಈ ಹಿಂದೆ ಪೌರ ಕಾರ್ಮಿಕರಾಗಿ ದುಡಿದು ನಿವೃತ್ತಿ ಹೊಂದಿರುವ ಕರಿಯಪ್ಪ ಮತ್ತು ಮೀನಾಕ್ಷಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೆ ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ನೃತ್ಯ ಪ್ರದರ್ಶನವನ್ನು ಪುಟ್ಟ ಮಕ್ಕಳು ನಡೆಸಿಕೊಟ್ಟರು.
ವೇದಿಕೆಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್, ನಗರ ಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್ ನಗರ ಪ್ರಧಾನ ಕಾರ್ಯದರ್ಶಿ ಕಾಳಚಂಡ ಅಪ್ಪಣ್ಣ, ಈ ವಾರ್ಡಿನ ನಗರ ಸಭೆ ಸದಸ್ಯರಾದ ಕಲಾವತಿ, ಗೌರಮ್ಮ, ದೇವಾಲಯದ ಅಧ್ಯಕ್ಷ ರಮೇಶ್, ನಗರ ಸಾಮಾಜಿಕ ಜಾಲ ತಾಣದ ಪ್ರಮುಖ ಪಾಂಡಿರ ಪೂಣಚ್ಚ, ಬೂತ್ ಅಧ್ಯಕ್ಷ ಮನು ರೈ, ಮುಕುಂದ, ವಿಕ್ಕಿ, ನಾಸಿರ್, ಕುಶಾಲ್, ಜೀವನ್ ಉಪಸ್ಥಿತರಿದ್ದರು
ಕಾರ್ಯಕ್ರಮದ ಕೊನೆಯಲ್ಲಿ ಪರಿಶಿಷ್ಟ ಮೋರ್ಚಾದ ನಗರ ಘಟಕದ ವತಿಯಿಂದ ಸಿಹಿ ಹಂಚಿ ನೆರದಿದ್ದವರಿಗೆ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕರ್ತ ಹರೀಶ್ ಸ್ವಾಗತಿಸಿ ರಮೇಶ್ ವಂದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!