Tuesday, May 30, 2023

Latest Posts

ಮೇ.31ರಿಂದ ನೇಪಾಳ ಪ್ರಧಾನಿ ‘ಪ್ರಚಂಡ’ ಭಾರತ ಪ್ರವಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದು, ಮೇ.31ರಿಂದ ನಾಲ್ಕು ದಿನಗಳು ಪ್ರಚಂಡ ಅವರು ಭಾರತ ಪ್ರವಾಸ ಮಾಡಲಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಮೂರನೇ ಬಾರಿಗೆ ನೇಪಾಳ ಪ್ರಧಾನಿ ಹುದ್ದೆ ಅಲಂಕರಿಸಿದ ಪ್ರಚಂಡ ಅವರ ಮೊದಲ ವಿದೇಶಿ ಪ್ರವಾಸ ಇದಾಗಿದೆ. ದ್ವಿಪಕ್ಷೀಯ ಸಂಬಂಧಗಳ ಕುರಿದು ಪ್ರಧಾನಿ ಮೋದಿ ಸೇರಿದಂತೆ ಉನ್ನತ ಮಟ್ಟದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಪ್ರಧಾನಿ ಪ್ರಚಂಡ ಅವರು ಮೇ. 31ರಿಂದ ಜೂನ್ ೩ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಠ್ಮಂಡುವಿನ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!