ಹೊಸದಿಗಂತ ಡಿಜಿಟಲ್
ಇನ್ಮುಂದೆ ರಾಜ್ಯ ಸರಕಾರವೇ 108 ಆ್ಯಂಬುಲೆನ್ಸ್ ಸರ್ವಿಸ್ ನೀಡಲಿದ್ದು, ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರುನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.