ಹೊಸದಿಗಂತ ಡಿಜಿಟಲ್ ಡೆಸ್ಕ್;
ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಭೆಯಲ್ಲಿ ರೆಪೋ ದರದ (Repo Rate) ಜತೆಗೆ ಆರ್‌ಬಿಐ ಕೆಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಂಡಿದೆ.
ಬ್ಯಾಂಕ್‌ಗಳಿಗೆ ಚೆಕ್ ಹಾಕಿದ ಕೆಲವೇ ಗಂಟೆಗಳಲ್ಲಿ ಮೊತ್ತವು ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂಬ ಘೋಷಣೆ ಮಾಡಿದೆ.
ಮೊಬೈಲ್‌ನಲ್ಲಿ ಯುಪಿಐ ಮೂಲಕ ಹಣ ವರ್ಗಾವಣೆ ಮಾಡುವುದು, ಬ್ಯಾಂಕ್‌ಗಳಲ್ಲಿ ಆರ್‌ಟಿಜಿಎಸ್, ಎನ್‌ಇಎಫ್‌ಟಿ (ನೆಫ್ಟ್) ಮೂಲಕ ಹಣ ವರ್ಗಾವಣೆ ಮಾಡುವ ಕಾಲದಲ್ಲಿ ಬ್ಯಾಂಕ್‌ನಲ್ಲಿ ಚೆಕ್ ಹಾಕಿದರೆ, 2-3 ದಿನ ಬೇಕಾಗುತ್ತಿತ್ತು. ವಾರಾಂತ್ಯ ಅಥವಾ ರಜೆ ಇದ್ದರೆ ಚೆಕ್‌ನ ಮೊತ್ತವು ಜಮೆಯಾಗಲು 4-5 ದಿನ ಬೇಕಾಗುತ್ತಿತ್ತು. ಈಗ ಬ್ಯಾಂಕ್‌ಗೆ ನೀಡಿದ ಕೆಲವೇ ಗಂಟೆಗಳಲ್ಲಿ ಮೊತ್ತವು ಇನ್ನು ಮುಂದೆ ಖಾತೆಗೆ ಜಮೆಯಾಗಲಿದೆ.
ರೆಪೋ ದರದ ಕುರಿತು ಮಾಹಿತಿ ನೀಡಿದ ಶಕ್ತಿಕಾಂತ ದಾಸ್, ʼಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಎಂಪಿಸಿ ಸಭೆಯಲ್ಲಿ ಆರು ಸದಸ್ಯರಲ್ಲಿ ನಾಲ್ವರು ಬಡ್ಡಿದರ ಯಥಾಸ್ಥಿತಿ ಮುಂದುವರಿಸುವ ಇಚ್ಛೆ ವ್ಯಕ್ತಪಡಿಸಿದ್ದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಶ ತಿಳಿಸಿದರು.
ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿತ್ತು.