ಹೊಸ ದಿಗಂತ ಡಿಜಿಟಲ್ ಡೆಸ್ಕ್
ಇನ್ಮುಂದೆ ಶಾಲೆಗಳಲ್ಲಿ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ವರ್ಷದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಯೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಯಾವುದೇ ಶಿಕ್ಷಣ ಸಂಸ್ಥೆಯಲ್ಲೂ ಮಕ್ಕಳ ಕೈಯಲ್ಲಿ ಶೌಚ ಸ್ವಚ್ಚತೆ ಮಾಡಿಸುವಂತಿಲ್ಲ. ಹಾಗೆ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇನ್ಮುಂದೆ ಶಾಲಾ ಸ್ವಚ್ಚತೆಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ ಎಂದರು.
ಅದೇ ರೀತಿ ಎಲ್ಲಾ ಶಾಲೆಯಲ್ಲೂ ಮುಂದಿನ ವರ್ಷದಿಂದ ಮಕ್ಕಳು ನೆಲದ ಮೇಲೆ ಕೂಳಿತು ಪಾಠ ಕೇಳುವಂತಿಲ್ಲ. 1 ರಿಂದ 10ನೇ ತರಗತಿ ವರೆಗೆ ಮಕ್ಕಳು ತರಗತಿಗಳಲ್ಲಿ ಬೆಂಚ್ ಮೇಲೆಯೇ ಕುಳಿತು ಪಾಠ ಕೇಳಬೇಕು. ಶಿಕ್ಷಣ ಇಲಾಖೆಯ ಆದೇಶ ಹೊರಡಿಸಿದೆ ಮುಂದಿನ ವರ್ಷದಿಂದಲೇ ಇದು ಜಾರಿಗೆ ಬರಲಿದೆ ಎಂದರು.