ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 21 ರಂದು ದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ನವೆಂಬರ್ 21 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ನಂದಿನಿ ಡೈರಿ ಔಟ್ಲೆಟ್ ಉದ್ಘಾಟಿಸಲಿದ್ದಾರೆ. ಇದೆ ವೇಳೆ ಹಿರಿಯ ನಾಯಕರನ್ನು ಕೂಡ ಭೇಟಿ ಮಾಡುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಕೆಎಂಎಫ್ ಹಾಲು ಮತ್ತು ಮೊಸರು ಕೂಡ ಮಾರಾಟವಾಗಲಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಹಾಗಿದ್ರೆ ಇನ್ಮುಂದೆ ಕರ್ನಾಟಕದ ನಂದಿನಿ ಘಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪಸರಿಸಲಿದೆ.