GOOD NEWS | ಇನ್ಮುಂದೆ ಕೆಎಸ್‌ಆರ್‌ಟಿಸಿ-ಬಿಎಂಟಿಸಿಯಲ್ಲಿ ಎರಡು ಸಾವಿರ ರೂಪಾಯಿ ನೋಟು ಸ್ವೀಕರಿಸ್ತಾರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಹಿಂದೆ ಪ್ರಯಾಣಿಕರಿಂದ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ತೆಗೆದುಕೊಳ್ಳದಂತೆ ಆದೇಶ ಹೊರಡಿಸಲಾಗಿತ್ತು. ಆದರೆ ಇದೀಗ ಈ ಆದೇಶವನ್ನು ಹಿಂಪಡೆಯಲಾಗಿದೆ.

ಬಿಎಂಟಿಸಿಯ ಹೊಸಕೋಟೆ ಡಿಪೋ ಪ್ರಯಾಣಿಕರಿಂದ ಎರಡು ಸಾವಿರ ರೂಪಾಯಿ ನೋಟು ಸ್ವೀಕರಿಸದಂತೆ ಆದೇಶ ಹೊರಡಿಸಿತ್ತು. ಆದರೆ ಇದೀಗ ಬಿಎಂಟಿಸಿ ಕಚೇರಿ ಈ ಆದೇಶವನ್ನು ಹಿಂಪಡೆಯಲಾಗಿದೆ. ಇದೀಗ ಪ್ರಯಾಣಿಕರು ಎರಡು ಸಾವಿರ ರೂಪಾಯಿ ನೋಟುಗಳನ್ನು ನೀಡಬಹುದಾಗಿದೆ.

ಆರ್‌ಬಿಐ ಮೇ. 19ರಂದು ಕ್ಲೀನ್ ನೋಟ್ ನೀತಿಗೆ ಅನುಗುಣವಾಗಿ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಹೇಳಿದ್ದು, ಬ್ಯಾಂಕ್‌ಗಳಿಗೆ ನೋಟು ವಿನಿಮಯಕ್ಕೆ ಅವಕಾಶ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!