ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆ ಮಹದೇಶ್ವರ ಪ್ರಸಾದ ಲಡ್ಡುವಿನಲ್ಲಿ ನಂದಿನಿ ತುಪ್ಪ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಮತ್ತು ಭಕ್ತರಿಗೆ ಉತ್ತಮ ಸೌಲಭ್ಯಗಳ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಂಡಿದ್ದಾರೆ.
ತಿರುಪತಿ ಲಡ್ಡು ಪ್ರಸಾದಕ್ಕೆ ರಾಜ್ಯದಿಂದ ನಂದಿನಿ ತುಪ್ಪವನ್ನು ಬಳಕೆ ಮಾಡುವ ಮಾದರಿಯಲ್ಲಿಯೇ, ಮಹದೇಶ್ವರ ದೇವಸ್ಥಾನದ ಪ್ರಸಾದ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು. ಜೊತೆಗೆ, ಮಹದೇಶ್ವರ ದೇವಸ್ಥಾನದ ಪ್ರಸಾದದ ಗುಣಮಟ್ಟವನ್ನೂ ಹೆಚ್ಚಳ ಮಾಡಬೇಕು. ಮುಂದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಡ್ಡುವನ್ನು ಕೇವಲ 35 ರೂಪಾಯಿಗೆ ವಿತರಿಸಬೇಕು ಎಂದು ಹೇಳಿದ್ದಾರೆ.