ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಫೋಟೋ, ವಿಡಿಯೋ ತೆಗೆಯುವಂತಿಲ್ಲ: ರಾಜ್ಯ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಇನ್ಮುಂದೆ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ/ವಿಡಿಯೋ ಮಾಡದಂತೆ ನಿಷೇಧಿಸಿ ಸರ್ಕಾರ ಆದೇಶಿಸಿದೆ.
ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಆದೇಶ ಹೊರಡಿಸಿದೆ.
ನೌಕರರ ಸಂಘ ತಮ್ಮ ಮನವಿಯಲ್ಲಿ, ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವರು ಕಚೇರಿಯ ಫೋಟೋ/ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಮನವಿ ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!